December 23, 2024

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಮನವಿ.

 

ಕೊಪ್ಪಳ.

 

ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ನವದೆಹಲಿ ಎಂ.ವೆಂಕಟೇಶರವರಿಗೆ ಮನವಿ ಸಲ್ಲಿಸಲಾಯಿತು.

ಹೊಸಪೇಟೆ ನಗರದ ಸರ್ಕೂಟ್ ಹೌಸ್ ನಲ್ಲಿ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ವೆಂಕಟೇಶರವರನ್ನು ಭೇಟಿಯಾದ ಕೊಪ್ಪಳ ಸಫಾಯಿ ಕರ್ಮಚಾರಿಗಳ ಆಯೋಗವು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಲಾಯಿತು ಹಾಗೂ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು.

ನಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಉಪ ಕಾರ್ಯದರ್ಶಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಉಪನಿರ್ದೇಶಕರು ಸಮಾಜಕಲ್ಯಾಣ ಇಲಾಖೆರವರ ಸಂಯೋಗದಲ್ಲಿ ಜಿಲ್ಲಾ ಪಂಚಾಯತ್ ಆಡಿಟೋರಿಯಂ ಹಾಲ್ ನಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಸಭೆಯಲ್ಲಿ ಕರ್ಮಚಾರಿಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿ ಜಿಲ್ಲಾ ಸಮಿತಿ ನಾಮನಿರ್ದೇಶನ ಸದಸ್ಯರಾದ ಕಾಶಪ್ಪ ಚಲವಾದಿ, ಮಾತನಾಡಿ ನಗರದ ಸ್ವಚ್ಛತೆಗೆ ಕರ್ಮಚಾರಿಗಳ ಪಾತ್ರ ಮಹತ್ವದ್ದು, ಕರ್ಮಚಾರಿಗಳಿಗೆ ಸರ್ಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ.ಅವರಿಗೆ ನಿರ್ದಿಷ್ಟ ಸಮಯದಲ್ಲಿ ಸಂಬಳ ತಲುಪುತ್ತಿಲ್ಲ,ಕಾಯಂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಇಂತಹ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಆದಷ್ಟು ಬೇಗ ಸರ್ಕಾರ ಸಫಾಯಿ ಕರ್ಮಚಾರಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಿಕೊಂಡರು.

 

ಈ ವೇಳೆ ಜಿಲ್ಲಾ ಸಮಿತಿ ನಾಮನಿರ್ದೇಶನ ಸದಸ್ಯರಾದ ರಗಡಪ್ಪ ಹುಲಿಹೈದರ, ತಾಲೂಕು ಮಟ್ಟದ ನಾಮನಿರ್ದೇಶನ ಸದಸ್ಯರಾದ ದುರುಗೇಶ ಚಲವಾದಿ,ನಿರ್ಮಲ ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!