ಕೊಪ್ಪಳ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕೊಪ್ಪಳ ಜಿಲ್ಲಾ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷರಾದ ನವೀನಕುಮಾರ ಈ ಗುಳಗಣ್ಣನವರ್ ಮಾತನಾಡಿ ಚುನಾವಣೆಯಲ್ಲಿ ಗೆಲ್ಲಲೂ ರಾಜ್ಯದ ಜನಕ್ಕೆ ಉಚಿತ ಖಚಿತ ನಿಶ್ಚಿತ ಅನ್ನುವ ಗ್ಯಾರಂಟಿ ಕೊಡುವ ಭರವಸೆಯನ್ನು ನೀಡಿ ಅದನ್ನು ಈಡೇರಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಈಗ ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಖಜಾನೆ ಖಾಲಿಯಾಗಿದೆ, ಖಾಲಿಯಾಗಿರುವ ಖಜಾನೆಯನ್ನು ತುಂಬಿಸಲು ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆಹಾಕುವ ಮೂಲಕ ಕಷ್ಟನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ ಇನ್ನಾದರು ಹೆಚ್ಚೆತ್ತುಕೊಂಡು ಈ ನಿರ್ಧಾರವನ್ನೂ ಹಿಂಪಡೆಯಬೇಕು ರಾಜ್ಯದ ಜನತೆಯ ಜೆಬಿಗೆ ಕೈ ಹಾಕುವುದನ್ನು ಬಿಟ್ಟು ಜನಕಲ್ಯಾಣ ಕಾರ್ಯಕ್ರಮಗಳನ್ನು ನೀಡಬೇಕು ಎಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಕುಷ್ಟಗಿ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಶಾಸಕರಾದ ಗಾಲಿ ಜನಾರ್ದನ ರೆಡ್ಡಿ,ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಬಸವರಾಜ ಕ್ಯಾವಟರ್ ಮಾಜಿ ಶಾಸಕರುಗಳಾದ ಪರಣ್ಣ ಮುನುವಳ್ಳಿ, ಬಸವರಾಜ ಧಡೆಸೂಗೂರು, ಎಲ್ಲಾ ಮಂಡಲದ ಅಧ್ಯಕ್ಷರು ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
More Stories
ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡಿ; ಸತ್ಯನಾರಾಯಣಪ್ಪ ಹರಪನಹಳ್ಳಿ
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು