December 23, 2024

ಎಂ. ಬಿ. ಭಾನುಪ್ರಕಾಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ.

 


 

ಕೊಪ್ಪಳ

 

ನಗರದ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಹಾಗೂ ನಿಕಟಪೂರ್ವ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿದ್ದ ಶ್ರೀ ಎಂ. ಬಿ. ಭಾನುಪ್ರಕಾಶ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು .

ನಂತರ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ನೆಡೆದ ಭ್ರಷ್ಟಚಾರ ವಿರೋಧಿಸಿ ಈ ದಿನಾಂಕ 28 ರಂದು ಮಾಡುವ ಪ್ರತಿಭಟನೆಯ ಪೂರ್ವಬಾವಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನವೀನಕುಮಾರ ಈ ಗುಳಗಣ್ಣವರ ಮಾತನಾಡಿ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು ಅಧಿಕಾರಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 180ಕ್ಕೂ ಹೆಚ್ಚು ಅಧಿಕಾ ಕೋಟಿ ರೂಪಾಯಿಗಳ ಅಧಿಕ ನಡೆದಿದ್ದು, ತೆಲಂಗಾಣದ 9ಕ್ಕೂ ಅಧಿಕ ಕಂಪನಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಹೇ ಕುರಿತು ಭಾಜಪ ಕೊಪ್ಪಳ ವತಿಯಿಂದ ಜೂನ್ 28ರಂದು ಪ್ರತಿಭಟನೆ ಆ ಯೋಜನೆ ಮಾಡಲಾಗಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

 

ಈ ಸಂದರ್ಭದಲ್ಲಿ ವಿರೋಧ ಪಕ್ಷದ ಮುಖ್ಯಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೆರೆ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಡಾಕ್ಟರ್ ಬಸವರಾಜ ಕ್ಯಾವಟರ್ ಮಾಜಿ ಶಾಸಕರುಗಳಾದ ಪರಣ್ಣ ಮನವಳ್ಳಿ,ಬಸವರಾಜ ದಡೆಸಗೂರ ಹಾಗೂ ಪಕ್ಷದ ಹಿರಿಯ ಮುಖಂಡರು ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!