December 23, 2024

05 ಗ್ಯಾರಂಟಿ ಯೋಜನೆಗಳ ಕೊಪ್ಪಳ ತಾಲೂಕ ಪ್ರಗತಿ ಪರಿಶೀಲನಾ ಸಭೆ

 

ಶ್ರೀ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ದ್ವೀತಿಯ ಸಭೆ

 

ಕೊಪ್ಪಳ:-

ರಾಜ್ಯ ಸರ್ಕಾರ ಜಾರಿಗೆ ತಂದಿರುವ 05 ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಶ್ರೀ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ  ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ* ಜರುಗಿತು.

 

ಗೃಹಲಕ್ಷ್ಮೀ ಯೋಜನೆಯ ಕುರಿತು ಸಭೆಯಲ್ಲಿ ಚರ್ಚಿಸಿದಾಗ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ವರದಿ ಮಂಡಿಸಿದಾಗ ತಾಂತ್ರಿಕ ಸಮಸ್ಯೆಯಿಂದ ಕೆಲವು ಫಲಾನುಭವಿಗಳಿಗೆ ಹಣ ಜಮೆಯಾಗಿರುವದಿಲ್ಲ. ಕೂಡಲೇ ಸರಿಪಡಿಸಲು ಮೇಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಲು ಸಮಿತಿಯ ಅಧ್ಯಕ್ಷರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ಗೃಹಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಕುರಿತು ತಾಲೂಕ ಮಟ್ಟದ ಅಧಿಕಾರಿಗಳು ವರದಿ ಮಂಡಿಸಿದರು.

5 ಗ್ಯಾರಂಟಿ ಯೋಜನೆಗಳ ಪ್ರತಿ ಫಲಾನುಭವಿಗೆ ತಲುಪುವಂತೆ ಕ್ರಮವಹಿಸಲು ಹಾಜರಿದ್ದ ಎಲ್ಲಾ ಸದಸ್ಯರು, ಅನುಷ್ಠಾನ ಅಧಿಕಾರಿಗಳಿಗೆ ಸಭೆಯ ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ತಾಲೂಕ ಪಂಚಾಯತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ, ಸಮಿತಿಯ ಸರ್ವ ಸದಸ್ಯರು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು, ಸಹಾಯಕ‌ ಲೆಕ್ಕಾಧಿಕಾರಿ ರವಿಕುಮಾರ, ಅಕ್ಷರ ದಾಸೋಹ ಸಹಾಯಕ‌ ನಿರ್ದೇಶಕ ಹನಮಂತಪ್ಪ, ತಾ.ಪಂ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!