ಸಾಹಿತ್ಯ ಲೊಕಕ್ಕೆ ಕಮಲಾ ಹಂಪನಾ ಅವರ ಕೊಡುಗೆ ಅಪಾರವಾಗಿದ್ದು ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಕೆ ವೈ ಕಂದಕೂರು ಅವರು ಅಭಿಪ್ರಾಯಪಟ್ಟರು.
ತಾಲೂಕಿನ ದೋಟಿಹಾಳ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದೋಟಿಹಾಳ-ಕೇಸೂರು ವತಿಯಿಂದ ಸಾಹಿತಿ ಡಾ.ಕಮಲಾ ಹಂಪನಾ ಅವರು ನಿಧನರಾದ ಹಿನ್ನಲೆಯಲ್ಲಿ ನುಡಿ ನಮನವನ್ನು ಸಲ್ಲಿಸಲಾಯಿತು. ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದರು ಡಾ.ಕಮಲಾ ಹಂಪನಾ ಅವರು ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದರು ಅವರ ಕೃತಿಗಳು ಅದ್ಬುತವಾಗಿವೆ ಎಂದರು.
ಸಾಹಿತಿ ನಿಂಗಪ್ಪ ಸಜ್ಜನ ಮಾತನಾಡಿ ಡಾ.ಕಮಲಾ ಹಂಪನಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡು ಬಿದಿರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರು ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು ಹಂಪನಾ ಅವರ ಬರವಣಿಗೆಯು ದೊಡ್ಡದಾಗಿದೆ. ಹಂಪನಾ ಅವರ ಲೇಖನಗಳು, ಸಂಶೋಧನೆಗಳ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಸಾಹಿತ್ಯ ಲೋಕಕ್ಕೆ ಹೆಮ್ಮೆ ತಂದಿದ್ದರು ಎಂದರು.
ಮೌನಾಚರಣೆ: ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ದೋಟಿಹಾಳ ಕೇಸೂರು ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಸಾಹಿತಿ ಡಾ.ಕಮಲಾ ಹಂಪನಾ ನಿಧನದ ಹಿನ್ನಲೆಯಲ್ಲಿ ಒಂದು ನಿಮಿಷಗಳ ಕಾಲ ಮೌನಾಚರಣೆಯನ್ನು ಮಾಡಲಾಯಿತು.
ಶಿಕ್ಷಕ ನಾಗರಾಜ ಶೆಟ್ಟರ, ರುದ್ರಮುನಿಸ್ವಾಮಿ ದೇವಾಂಗಮಠ, ರಹಿಮಾನಸಾಬ ಮಾರನಬಸರಿ ಮಾತನಾಡಿದರು. ಈ ಸಂದರ್ಭದಲ್ಲಿ ಹನುಮಂತರಾವ ದೇಸಾಯಿ, ಶ್ರೀನಿವಾಸ ಕಂಟ್ಲಿ, ಉಮಾಪತಿ ಮಾಳಗಿ, ಪರಶಿವಮೂರ್ತಿ ಮಾಟಲದಿನ್ನಿ, ಶೇಖಪ್ಪ ದೊಡ್ಡಮನಿ, ಮಂಜುನಾಥ ಅಂಗಡಿ, ಹಿದಾಯತ್ ನೀಲಗಾರ, ಚನ್ನಬಸವ ಚೌರಿ,ಅಮರೇಶ ತಾರಿವಾಳ ಸೇರಿದಂತೆ ಹಲವರು ಇದ್ದರು.
ಪೋಟೊ: ಕುಷ್ಟಗಿ ತಾಲೂಕಿನ ದೋಟಿಹಾಳದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಸಾಪ ವತಿಯಿಂದ ಸಾಹಿತಿ ಡಾ.ಕಮಲಾ ಹಂಪನಾ ಅವರಿಗೆ ನುಡಿನಮನವನ್ನು ಸಲ್ಲಿಸಲಾಯಿತು.
ವರದಿಗಾರರು ಶರಣಪ್ಪ ಕುಷ್ಟಗಿ
More Stories
ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡಿ; ಸತ್ಯನಾರಾಯಣಪ್ಪ ಹರಪನಹಳ್ಳಿ
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು