December 22, 2024

ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಾರ್ಯಾಲಯದ ಉದ್ಘಾಟನೆಯನ್ನು

ಕುಷ್ಟಗಿ:ಜೂ ೨೭ ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಾರ್ಯಾಲಯದ ಉದ್ಘಾಟನೆಯನ್ನು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಫಾರೂಕ್ ಡಾಲಾಯತ್ ಅವರು ಕಚೇರಿಯನ್ನು ಉದ್ಘಾಟಿಸಿದರು. ನಂತರ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಅವರು ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ನೀಡಿ ಮಾತನಾಡಿ ನಮಗೆ ಸಾರಿಗೆ ಇಲಾಖೆ ವಿದ್ಯುತ್ ಇಲಾಖೆ ಆಹಾರ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಮತ್ತು ಯುವ ನಿಧಿ ಕಾರ್ಯಕ್ರಮಗಳು ಜಾರಿಯಲ್ಲಿದೆ ಗೃಹಲಕ್ಷ್ಮಿ ಅನ್ನ ಭಾಗ್ಯ ಉಚಿತ ವಿದ್ಯುತ್ತು ಸರಿಯಾಗಿ ಜನಸಾಮಾನ್ಯರಿಗೆ ಮುಟ್ಟುವಂತೆ ಆಗಬೇಕು ಇವುಗಳನ್ನೆಲ್ಲ ಅನುಷ್ಠಾನ ಮಾಡೋದಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನೂತನ ಕಾರ್ಯಾಲಯಗಳನ್ನು ಮಾಡಿ ಸಮರ್ಪಕವಾದ ರೀತಿಯಲ್ಲಿ ಅನುಷ್ಠಾನ ಮಾಡಲು ಕಚೇರಿಯನ್ನು ಪ್ರಾರಂಭಿಸಿದ್ದೇವೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸದಸ್ಯರಾದ ಶಾರದಾ ಕಟ್ಟಿಮನಿ ಬರಮಪ್ಪ ಉಪ್ಪಾರ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಡಾ: ಶೇಖರ ಗೌಡ ಮಾಲಿಪಾಟೀಲ್ ಸೋಮಶೇಖರ್ ವೈಜಾಪುರ ಗ್ಯಾರೆಂಟಿ ಯೋಜನೆಗಳ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದ್ದರು ಇಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಫಾರೂಕ್ ಡಾಲಾಯತ್ ಅವರು ವಹಿಸಿದ್ದರು ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯ ವಿ ಎಸ್  ಕಾಡಗಿ ಮಠ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ವರದಿಗಾರರು ಶರಣಪ್ಪ ಲೈನದ್ ಚಿಕ್ಕಮನ್ನಾಪುರ

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!