December 22, 2024

ನವದೆಹಲಿಯಲ್ಲಿ ರಾಜ್ಯದ  ಸಂಸದರ ಸಭೆ 

 

ನವದೆಹಲಿ.

 

ರಾಷ್ಟ್ರ ರಾಜಧಾನಿ ನವದೆಹಲಿಯ ಹೋಟಲ್‌ ಲೀಲಾ‌ ಪ್ಯಾಲೇಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ರವರು ಕರ್ನಾಟಕದ ನೂತನ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆಗೆ ಸಭೆ ಮತ್ತು ಔತಣ ಕೂಟ ನಡೆಸಿದರು.

ರಾಜ್ಯದ ಅಭಿವೃದ್ಧಿಗಾಗಿ ಯೋಜನೆಗಳ ರೂಪರೇಷ, ಕೇಂದ್ರದಿಂದ ರಾಜ್ಯಕ್ಕೆ ಅಧಿಕ ಅನುದಾನ, ಬಡವರ ಕಲ್ಯಾಣಕ್ಕಾಗಿ ಯೋಜನೆಗಳು, ರೈತರ ಕಲ್ಯಾಣಕ್ಕಾಗಿ ಯೋಜನೆಗಳು ಹಾಗೂ ಇನ್ನಿತರ ರಾಜ್ಯದ ಸಮಸ್ಯೆ ಮತ್ತು ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಸಮಾಲೋಚನೆ ನಡೆಸಲಾಯಿತು.

 

ಈ ಕಾರ್ಯಕ್ರಮದಲ್ಲಿ ಕೇಂದ್ರ ಮಂತ್ರಿಗಳಾದ ನಿರ್ಮಲಾ ಸೀತಾರಾಮನ್,ಎಚ್ ,ಡಿ ಕುಮಾರಸ್ವಾಮಿ, ವಿ ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದ ಡಾ.ಮಂಜುನಾಥ,ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್ ಸೇರಿದಂತೆ ರಾಜ್ಯದ 28 ಸಂಸದರು, ರಾಜ್ಯದ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!