December 22, 2024

ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು  ಮಹೇಶ್ ಲಕಮಾಪೂರ ಹರ್ಷ.

 

ಕುಕನೂರು

2024ರ ಲೋಕಸಭಾ ಚುನಾವಣೆಯ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಭರ್ಜರಿ ಜಯ ಸಾಧಿಸಿದ್ದು ಎಂದು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಮಹೇಶ್ ಲಕಮಾಪೂರ ಹರ್ಷ ವ್ಯಕ್ತಪಡಿಸಿದರು.

 

ಈ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಗೆಲುವು ನಿಶ್ಚಿತವಾಗಿತ್ತು.ಕಳೆದ ಹದಿನೈದು ವರ್ಷಗಳ ಕಾಲ ಬಿಜೆಪಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು ಕ್ಷೇತ್ರದ ಜಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಬಿಜೆಪಿ ವಿಫಲವಾಗಿದೆ.

ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸಿದ ನರೇಂದ್ರ ಮೋದಿ ಅವರ ಸರ್ಕಾರ ಜನಸಾಮಾನ್ಯರ ಜೀವನ ಸುಧಾರಣೆ ಯಾವುದೇ ಯೋಜನೆಗಳನ್ನು ರೂಪಿಸದೆ ಬರಿ ಪೊಳ್ಳು ಆಶ್ವಾಸಗಳ ಮೂಲಕ ಜನರನ್ನು ದಾರಿತಪ್ಪಿಸುತ್ತಿರುವ ಕೆಲಸವನ್ನು ಮಾಡುತ್ತಿದ್ದರು. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ದೇಶದ ಜನರು ಕಾಂಗ್ರೆಸ್ ಬೆಂಬಲಿತ ಮೈತ್ರಿಕೂಟಕ್ಕೆ ಬೆಂಬಲ ನೀಡಿದ್ದು ಈ ಬಾರಿ ಯಾ ಚುನಾವಣೆಯಲ್ಲಿ 230 ಕ್ಕೂ ಅಧಿಕ ಸ್ಥಾನಗಳನ್ನು ನೀಡಿದೆ. ಹಾಗೆಯೇ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಕಾಂಗ್ರೆಸ್ ವಿಜಯ ಪತಾಕೆಯನ್ನು ಆರಿಸಿದ್ದು ಕಳೆದ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ಜರಿ ಗೆಲುವು ಕಂಡಿತ್ತು.

ಅದೇ ಟ್ರೆಂಡ್ ಲೋಕಸಭೆ ಚುನಾವಣೆಯಲ್ಲಿಯೂ ಮುಂದುವರಿದಿದೆ.

ಬೀದರ್, ಗುಲಬರ್ಗಾ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಲೋಕಸಭೆ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದೆ.

ಇದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಲ ನೀಡಿದೆ.

ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದು

ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ಇನ್ನು ರಾಜ್ಯದಲ್ಲಿ ಗೆದ್ದಿರೋ 9 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ಗೆದ್ದಿರೋದು ಕಲ್ಯಾಣ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅನ್ನೋದು ವಿಶೇಷ.

ಹೌದು ಕಲ್ಯಾಣ ಕರ್ನಾಟಕ ಭಾಗದಲ್ಲಿರೋ ಐದಕ್ಕೂ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದೆ.ವಿಶೇಷ ಅಂದ್ರೆ 2019 ರಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಈ ಐದು ಸ್ಥಾನದಲ್ಲಿ ಗೆದ್ದಿತ್ತು. ಆದ್ರೆ 2024 ರ ಚುನಾವಣೆಯಲ್ಲಿ ಬಿಜೆಪಿ ಐದು ಕ್ಷೇತ್ರದಲ್ಲಿ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಕಲ್ಯಾಣ ಕರ್ನಾಟಕದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ ಎಂದು ಹೇಳಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!