December 23, 2024

ಕುಷ್ಟಗಿ ಪಟ್ಟಣದ ಸರಕಾರಿ ಪಾಲಿಟೆಕ್ಮಿಕ್ ಕಾಲೇಜ್ ಆಡಳಿತಾತ್ಮಕ ಕಛೇರಿ ಮತ್ತು ಪ್ರಯೋಗಾಲಯ ಉದ್ದಾಘಟನೆ

ಕುಷ್ಟಗಿ: ಪಟ್ಟಣದ ಸರಕಾರಿ ಪಾಲಿಟೆಕ್ಮಿಕ್ ಕಾಲೇಜು ಆವರಣದಲ್ಲಿ ನಿರ್ಮಾಣವಾಗುತ್ತಿರುವ ಆಡಳಿತಾತ್ಮಕ ಕಚೇರಿ ಮತ್ತು ಪ್ರಯೋಗಾಲಯ ಸೇರಿದಂತೆ ವಿವಿಧ ಕಟ್ಟಡಗಳನ್ನು ಸಮರ್ಪಕವಾಗಿ ಗುಣಮಟ್ಟದ ಕಟ್ಟಡವನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಅವರು ಹೇಳಿದರು.
ಪಟ್ಟಣದ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಎಸ್ಇಬಿ ಮತ್ತು ಕೆಎಸ್ಪಿ ಯೋಜನೆಯ 2 ಕೋಟಿ ಅನುದಾನದಲ್ಲಿ ಮಂಜೂರಾದ ಹೆಚ್ಚುವರಿ ಆಡಳಿತಾತ್ಮಕ ಕಚೇರಿ, ಮತ್ತು ಪ್ರಯೋಗಾಲಯ ಕಟ್ಟಡ ನಿರ್ಮಾಣದ ಅಡಿಗಲ್ಲು ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಈ ಸಂದರ್ಭದಲ್ಲಿ ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ, ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳು, ಪುರಸಭೆಯ ಸದಸ್ಯರು ಹಾಗೂ ಕಾಲೇಜಿನ ಉಪನ್ಯಾಸಕರು ಸಾರ್ವಜನಿಕರು ಇದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!