December 23, 2024

ಡೆಂಗ್ಯು, ಚಿಕ್ಕನ್ ಗುನ್ಯದಂತ ರೋಗಗಳಿಂದ ದೂರ ಇರಲು ಸ್ವಚ್ಛತೆ ಕಾಪಾಡಿಕೊಳ್ಳಿ: ರತ್ನಮ್ಮ

ಹಿರೇಮ್ಯಾಗೇರಿ ಗ್ರಾ.ಪಂನಲ್ಲಿ ಆರೋಗ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು

ಯಲಬುರ್ಗಾ:

ಮಳೆಗಾಲದ ಸಂದರ್ಭದಲ್ಲಿ ಅಲ್ಲಲ್ಲಿ ಮಳೆನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯುನಂತ ರೋಗಗಳಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕೈಗೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರತ್ನಮ್ಮ ಗುಂಡಣ್ಣನವರ್ ಸಲಹೆ ನೀಡಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಚ್.ಸೋಂಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕೂಲಿಕಾರರಿಗಾಗಿ ಆಯೋಜಿಸಿದ್ದ ಆರೋಗ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಬೇಕು. ಮಾರಕ ರೋಗಗಳಿಗೆ ತುತ್ತಾಗದಂತೆ ನೋಡಿಕೊಳ್ಳಬೇಕು. ಉದ್ಯೋಗ ಖಾತ್ರಿ ಕೆಲಸಕ್ಕೆ ಬರುವ ತಮ್ಮೆಲ್ಲರ ಆರೋಗ್ಯದ ಕಾಳಜಿಯಿಂದ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಇದರ ಸದುಪಯೋಗವನ್ನು ತಾವುಗಳು ಪಡೆದುಕೊಳ್ಳಬೇಕು ಎಂದರು.

ಗ್ರಾ.ಪಂ ಅಧ್ಯಕ್ಷರಾದ ಕಳಕಪ್ಪ ಎಚ್, ಆರೋಗ್ಯ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ, ಗ್ರಾಮ ಕಾಯಕ ಮಿತ್ರರು, ಕೂಲಿಕಾರರು ಹಾಜರಿದ್ದರು.

 

 

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!