December 23, 2024

ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ

 

ಹೊಸಪೇಟೆ (ವಿಜಯನಗರ ಜಿಲ್ಲೆ)

 

ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

 

ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ ಅವರು ನೂತನ ಜಿಪಂ ಸಿಇಓ ಅವರಿಗೆ ಸ್ವಾಗತಿಸಿ, ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರ ಹಸ್ತಾಂತರಿಸಿದರು.

2020ರ ಬ್ಯಾಚ್ ನ ಕರ್ನಾಟಕ ಕೇಡರನ ಐಎಎಸ್ ಅಧಿಕಾರಿಯಾಗಿರುವ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ಮೂಲತಃ ಮಣಿಪುರ ರಾಜ್ಯದ ಇಂಪಾಲ್ ದವರಾಗಿದ್ದಾರೆ. ಕಂಪ್ಯೂಟರ್ ಸಾಯನ್ಸ್ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಇವರು ಈ ಮೊದಲು ವಿಜಯನಗರ ಜಿಲ್ಲೆಯಲ್ಲಿ ಕಳೆದ 12 ತಿಂಗಳಿನಿಂದ ಹೊಸಪೇಟೆ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!