December 23, 2024

ಕಾಂಗ್ರೇಸ ಪಕ್ಷದ ದುರಾಡಳಿತ ಭ್ರಷ್ಟಾಚರದ ಜನಗಳಿಗೆ ಅರಿವು ಮುಟಿಸುವ ಪ್ರಯತ್ತ

ಇಂದು ಜಿಲ್ಲಾ ಪಕ್ಷದ ಕಾರ್ಯಾಲಯದಲ್ಲಿ ಕೊಪ್ಪಳ ಜಿಲ್ಲೆಯ ಜಿಲ್ಲಾ ಹಾಗೂ ತಾಲೂಕುಗಳ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರು ಹಾಗೂ ಸಹ ಸಂಚಾಲಕರ ಸಭೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನವೀನಕುಮಾರ ಈ ಗುಳಗಣ್ಣವರ ನೇತೃತ್ವದಲ್ಲಿ ಮಾಡಲಾಯಿತು .

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ ಹಾಗೂ ಹಗರಣಗಳು, ನಿಗಮಗಳಲ್ಲಿ ನಡೆಯುವ ಭ್ರಷ್ಟಾಚಾರದ ಕುರಿತು ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಜನಪರ & ಅಭಿವೃದ್ಧಿಪರ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕೆಂದು ಸಲಹೆ, ಸೂಚನೆಗಳನ್ನು ನೀಡಲಾಯಿತು.ಬಿಜೆಪಿ ಸಾಮಾಜಿಕ ಜಾಲತಾಣ ಕೊಪ್ಪಳ ಸೇರಿದಂತೆ ಎಲ್ಲಾ ಮಂಡಲಗಳ ಸಂಚಾಲಕರು ಹಾಗೂ ಸಹ ಸಂಚಾಲಕರು ಪ್ರಾಮಾಣಿಕವಾಗಿ,ನಿಷ್ಠೆಯಿಂದ ಕೆಲಸ ಮಾಡಬೇಕೆಂದು ತಿಳಿಸಲಾಯಿತು,

ಈ ಸಂದರ್ಭದಲ್ಲಿ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾದ ಮಂಜುನಾಥ ಯತ್ನಟ್ಟಿ, ಸಹ ಸಂಚಾಲಕ ಮಾಂತೇಶ್ ಮಾಲಿಪಾಟೀಲ, ಪ್ರಮುಖರಾದ ದ್ಯಾಮಣ್ಣ ಬೇವುರ, ಪಂಪಾಪತಿ ಕುದರಿಮೋತಿ, ಸೇರಿದಂತೆ ಕೊಪ್ಪಳ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರ ಸಂಚಾಲಕರು ಸಹ ಸಂಚಾಲಕರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!