December 23, 2024

ರೈಲ್ವೆ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆ

 

 

ಕೊಪ್ಪಳ.

 

 

 

 

ಲೋಕಸಭಾ ಸದಸ್ಯರಾದ ರಾಜಶೇಖರ್ ಹಿಟ್ನಾಳ್ ಅವರು ಕೊಪ್ಪಳ ಲೋಕ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಷ್ಟಾನಗೊಳ್ಳುತ್ತಿರುವ ವಿವಿಧ ರೈಲ್ವೆ ಕಾಮಗಾರಿಗಳ ಕುರಿತು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಇಲಾಖೆಯ ಜನರಲ್ ಮ್ಯಾನೇಜರವರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಲೋಕಸಭಾ ವ್ಯಾಪ್ತಿಯಲ್ಲಿ ಪ್ರಗತಿ ಹಂತದಲ್ಲಿರುವ ರೈಲು ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಜನರ ಓಡಾಟಕ್ಕೆ ಅನುವು ಮಾಡಿಕೊಡಬೇಕು, ಹೊಸ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ  ಇನ್ನಿತರ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!