ಕುಕನೂರ :
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಯಾವುದೇ ರೀತಿಯ ಅಡ್ಡಿಯಾಗಿಲ್ಲ ಅವುಗಳ ಜೊತೆ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.
ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಅಧಿಕಾರಿಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಹಂತ ಹಂತವಾಗಿ ನೀಡುತ್ತಾ ಬಂದಿದ್ದು ಈ ಯೋಜನೆಯಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ.
ಈ ಗ್ಯಾರಂಟಿ ಯೋಜನೆಗೆ 60 ರಿಂದ 65, ಸಾವಿರ ಕೋಟಿ ಹಣ ಬೇಕಾಗಿದೆ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಇಲ್ಲ, ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ ಆದರೆ ಸಿಎಂ ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿರುವುದಾಗಿ ಹಲವು ಮಾಧ್ಯಮದಲ್ಲಿ ವರದಿಯಾಗಿದ್ದು ಇದು ಸತ್ಯಕ್ಕೆ ದೂರವಾಗಿದೆ ಉದಾಹರಣೆಗೆ ಹೇಳುವುದಾದರೆ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ 970 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ ಇದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಷಯವಾಗಿದ್ದು ಆದರೂ ಕೆಲ ಕಿಡಿಗೇಡಿಗಳು ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ.
ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಅನುದಾನ ಕೇಳುತ್ತಿದ್ದಾರೆ ಆದರೆ ಸಿಎಂ ಯಾರಿಗೂ ಅನುದಾನ ನೀಡಿಲ್ಲ ಸಿಎಂ ಜೊತೆ ಇರುವ ನನಗೆ ಮಾತ್ರ ಪಂಚ ಗ್ಯಾರಂಟಿ ಯೋಜನೆಗೆ ಹಣ ವಂದಿಸಲು ತುಂಬಾ ಕಷ್ಟವಾಗುತ್ತಿದೆ ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ನೇಮಿಸಿಕೊಂಡಿದ್ದಾರೆ ಎಂದು ಪ್ರಕಟಿಸಿದ್ದು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಹಣಕಾಸಿನ ತೊಂದರೆ ಇಲ್ಲವೇ ಇಲ್ಲ. ಎಲ್ಲಾ ಕಡೆ ಅಭಿವೃದ್ಧಿ ಕಾರ್ಯಗಳು ಪ್ರಾರಂಭಗೊಂಡಿವೆ ಇನ್ನೂ ಕೆಲವೇ ದಿನಗಳಲ್ಲಿ ಮುಕ್ತಾಯ ಹಂತವನ್ನು ಸಹ ತಲುಪಿರುತ್ತವೆ ಗ್ಯಾರೆಂಟಿಗಳ ಜೊತೆ ಜೊತೆಗೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೂ ನಮ್ಮ ಸರ್ಕಾರ ಬದ್ಧವಾಗಿದ್ದು ಆದ್ದರಿಂದ ಇಂತಹ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
More Stories
ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡಿ; ಸತ್ಯನಾರಾಯಣಪ್ಪ ಹರಪನಹಳ್ಳಿ
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು