December 23, 2024

ಕಾನೂನು ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ.

 

ಕೊಪ್ಪಳ

ನಗರದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದಲ್ಲಿ ಕಾನೂನಿನ ಅಂತಿಮ ವರ್ಷ, ದ್ವಿತೀಯ ವರ್ಷದ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

 

ಗೌರವಾನ್ವಿತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಅವರು ಉದ್ಘಾಟಿಸುವವರು. ಶ್ರೀ ಈರೇಶ್ ಬಿ ಅಂಚಟಗೇರಿ ಕಾರ್ಯಕಾರಿ ಅಧ್ಯಕ್ಷರು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕರ್ನಾಟಕ ಮತ್ತು ಮಾಜಿ ಮೇಯರ್ ಹೆಚ್ ಡಿ ಎಂ ಸಿ ಹುಬ್ಬಳ್ಳಿ ಅವರು ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ಶ್ರೀ ಮಲಕಾರಿ ರಾಮಪ್ಪ ಒಡೆಯರ್ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ.

 

ಅತಿಥಿಗಳಾಗಿ ಶ್ರೀ ರಾಘವೇಂದ್ರ ತವನಪ್ಪನವರ್ ಹಿಂದಿ ಪ್ರಚಾರ ಸಭಾದ ಅಧ್ಯಕ್ಷರು ಧಾರವಾಡ, ಶ್ರೀ ಬಸವರಾಜು ವಸ್ತ್ರದ್, ಶ್ರೀ ಜಗದೀಶ್ ಎಮ್ ಮಳಗಿ, ಶ್ರೀ ಎಸ್ ರಾಧಾಕೃಷ್ಣನ್ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಕಾರ್ಯದರ್ಶಿಗಳು ಧಾರವಾಡ, ಶ್ರೀ ಉಷಾದೇವಿ ಎಸ್ ಹಿರೇಮಠ್ ಕಾಲೇಜಿನ ಪ್ರಾಚಾರ್ಯರು, ಉಪ ಪ್ರಾಚಾರ್ಯರು ಬಸವರಾಜ್ ಎಸ್ಎಂ, ಕಾಲೇಜಿನ ಉಪನ್ಯಾಸಕ ವರ್ಗದವರು, ಸಿಬ್ಬಂದಿಗಳು, ಈ ಒಂದು ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ಪ್ರಥಮ ದ್ವಿತೀಯ ತೃತೀಯ ವರ್ಷದ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಾರೆ ಎಂದು ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಉಷಾದೇವಿ ಎಸ್ ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!