“ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲಯಲ್ಲಿ ನಾಪತ್ತೆಯಾಗಿದ್ದ ಶಾಸಕ ಬಸನಗೌಡ ದದ್ದಲ್ ಪ್ರತ್ಯೇಕ್ಷರಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ವಿಧಾನಮಂಡಲ ಅಧಿವೇಶನಕಕೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಎರಡು ದಿನ ಊರಿಗೆ ಹೋಗಿದ್ದೆ. ಸದನದಲ್ಲಿ ವಾಲ್ಮೀಕಿ ಹಗರಣದ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಹೆಸರು ಕೇಳಿ ಬಂದ ಬಳಿಕ ಶಾಸಕ ಬಸನಗೌಡ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ನಿನ್ನೆಯಷ್ಟೇ ಪೋಸ್ಟರ್ ರಿಲೀಸ್ ಮಾಡಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಸಂಬಂಧ ಈಗಾಗಲೇ ಈ ಇಲಾಖೆಯ ಸಚಿವರಾಗಿದ್ದ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.”
More Stories
ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡಿ; ಸತ್ಯನಾರಾಯಣಪ್ಪ ಹರಪನಹಳ್ಳಿ
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು