December 22, 2024

ಕನ್ನಡಿಗರ ಮೀಸಲಾತಿಗೆ ತಡೆ ನೀಡಿದ ಕ್ರಮ ಖಂಡನಿಯ; ಗಿರೀಶಾನಂದ

 

ಕೊಪ್ಪಳ:

ಕರ್ನಾಟಕ ರಕ್ಷಣಾ ವೇದಿಕೆ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಜಾರಿಗೊಳಿಸಲು ಅಧಿವೇಶನದಲ್ಲಿ ಅಂಗೀಕಾರ ಮಾಡಿದ್ದು ಕೆಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಕ್ಕೆ ಈಗ ತಡೆ ಹಿಡಿದಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿನ ಉದ್ಯಮಿಗಳು ಸರ್ಕಾರದ ಎಲ್ಲಾ ಸವಲತ್ತುಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಂಡು ಬೆಂಗಳೂರಿನಂತಹ ನಗರದಲ್ಲಿ ಬೃಹತ್ ಕಂಪೆನಿಗಳನ್ನ ನಡೆಸುತ್ತ ಆದಾಯ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇವರು ಕನ್ನಡಿಗರಿಗೆ ಉದ್ಯೋಗ ಕೊಡುವುದಕ್ಕೆ ಮೀನಾಮೇಷ ಎಣಿಸುತ್ತಾರೆ. ಇದು ಸರಿಯಲ್ಲ ಎಂದು ಹೇಳಿದರು.

 

ಕನ್ನಡಿಗರಿಗೆ ಕೌಶಲ್ಯಾಭಿವೃದ್ಧಿ ಕೊರತೆ ಎಂದು ಕುಂಟು ನೆಪಹೇಳುತ್ತಾರೆ. ಆದರೆ ಇದೇ ಕನ್ನಡಿಗರನ್ನ ಅಮೆರಿಕ, ಯುರೋಪ್, ಇಂಗ್ಲೆಂಡ್ ಜರ್ಮನಿಯಲ್ಲಿನ ದೊಡ್ಡ ದೊಡ್ಡ ಕಂಪನಿಗಳಲ್ಲಿ ಉದ್ಯೋಗಕ್ಕಾಗಿ ಆಹ್ವಾನಿಸಲಾಗುತ್ತದೆ. ಕಳೆದಜುಲೈ ಒಂದರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಂತ ಪ್ರತಿಭಟನೆ ಮಾಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ಮಂಡಿಸಲು ಮತ್ತು ಕಾನೂನು ರೂಪಿಸಲು ಮುಂದಾಗಿದ್ದರು. ಕೆಲವು ಕನ್ನಡದ ದ್ರೋಹಿಗಳು ಇದನ್ನು ಎಂದು ತಿಳಿಸಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9902633914, 8495071599, 7760442363, 9972272232
0Shares
error: Content is protected !!