ವಿದ್ಯಾರ್ಥಿಗಳು ಅಮೂಲ್ಯವಾದ ಸಮಯವನ್ನು ಹಾಳು ಮಾಡದೆ ಸಮಯವನ್ನು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕು ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಸ್ಥಾನಗಳನ್ನು ಹೊಂದಬೇಕು ಎಂದು ಕೆ.ಎಲ್.ಇ. ಕಾಲೇಜು ಕುಕನೂರ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಸತ್ಯನಾರಾಯಣಪ್ಪ ಹರಪನಹಳ್ಳಿ ಹೇಳಿದರು.
ಪಟ್ಟಣದ ಕೆ.ಎಲ್.ಇ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೆ.ಎಲ್.ಇ. ಕಾಲೇಜು ಕುಕನೂರ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಸತ್ಯನಾರಾಯಣಪ್ಪ ಹರಪನಹಳ್ಳಿ, ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾ-ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿಗಳು ವೃಥಾ ಕಾಲಹರಣ ಮಾಡದೇ ಸಮಯಕ್ಕೆ ಮಹತ್ವ ನೀಡುವುದರ ಮೂಲಕ ಸಮಯದ ಸದುಪಯೋಗ ಮಾಡಿಕೊಂಡು ಉತ್ತಮವಾಗಿ ವಿದ್ಯಾಬ್ಯಾಸ ನಡೆಸಿ ಉತ್ತಮ ಅಂಕಗಳನ್ನು ಗಳಿಸಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ನಿಮ್ಮ ಪಾಲಕರಿಗೂ ಹಾಗೂ ವಿದ್ಯಾಬ್ಯಾಸ ನಡೆಸಿದ ಸಂಸ್ಥೆಗಳಿಗೂ ಹೆಸರು ತರಬೇಕು ಎಂದರು.
ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಸಂಗೀತಾ ಬಿಸಿರೊಟ್ಟಿ, ಮಹೇಶ್ವರಿ ಹುಲಿ, ಸಂಜನಾ ಕೊರ್ಲಗುಂದಿ ಮೊದಲಾದರವರು ಕಾಲೇಜಿನ ಬಗ್ಗೆ ಉಪನ್ಯಾಸಕರ ಬಗ್ಗೆ ತಮ್ಮ ಅನಿಸಿಕೆಗಳನ್ನು ಸಮಾರಂಭದಲ್ಲಿ ವ್ಯಕ್ತಪಡಿಸಿದರು. ಉಪನ್ಯಾಸಕರು ಬೋಧಿಸುವ ರೀತಿ ಹಾಗೂ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಬಗ್ಗೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಆರುಣಕುಮಾರ ಹಿರೇಮಠರವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಕೆ.ಎಲ್.ಇ. ಕಾಲೇಜು, ಕುಕನೂರಿನ ವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲಿ ಬೆಳವಣಿಗೆ ಸಾಧಿಸದೇ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಜ್ಯಮಟ್ಟದವರೆಗೂ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಬೆಳವಣಿಗೆಯಲ್ಲಿ ಉಪನ್ಯಾಸಕರ ಹಾಗೂ ಸ್ಥಾನಿಕ ಆಡಳಿತ ಮಂಡಳಿಯವರ ಸಹಾಯ, ಸಹಕಾರ ಸದಾ ಸ್ಮರಣೀಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಯಂಕಣ್ಣ ಯರಾಶಿಯವರು ಮಾತನಾಡುತ್ತಾ ಕಲ್ಯಾಣ ಕರ್ನಾಟಕದ ಗ್ರಾಮೀಣ ಭಾಗವಾದ ಕುಕನೂರು ತಾಲ್ಲೂಕಿನಲ್ಲಿ ಕೆ.ಎಲ್.ಇ. ಕಾಲೇಜು ಶಿಕ್ಷಣದ ದಾಸೋಹ ನೀಡುತ್ತಿರುವುದು ದಿನದಿಂದ ದಿನಕ್ಕೆ ಪ್ರಗತಿಯನ್ನು ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು. ಕಾಲೇಜಿನ ಹಿರಿಯ ಇತಿಹಾಸ ಉಪನ್ಯಾಸಕರಾದ ಶ್ರೀ ಶರಣಪ್ಪ ಉಮಚಗಿಯವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಒಳ್ಳೆಯ ನಡತೆ ಗುಣ ಮುಖ್ಯ ಎಂದು ಹಿತನುಡಿಗಳನ್ನು ಹೇಳಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಜವಾಬ್ದಾರಿ, ಸತತ ಅಧ್ಯಯನ ಇರಬೇಕೆಂದು ಕಿವಿಮಾತು ಹೇಳಿದರು.
ಕುಮಾರಿ, ರಜಿಯಾಬೇಗಂ, ಸೌಜನ್ಯ ಕೊಡಗಲಿ, ಮಂಜುಳಾ ಘಾಟಿ ಕಾರ್ಯಕ್ರಮ ನಿರೂಪಿಸಿದರು. ಕುಮಾರ, ಸರ್ವೇಶ ಕುಕನೂರ ಇವರು ಪ್ರಾರ್ಥನೆಗೈದರು. ಕುಮಾರಿ. ಭೀಮಾಂಬಿಕಾ ಈಬೇರಿ ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮ ನಡೆಸಿದರು. ಶ್ರೀ ಎಸ್.ಎಸ್. ರಾಜೂರ, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸುಶ್ಮಿತಾ ಬಡಿಗೇರ ವಂದಿಸಿದರು. ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು
More Stories
ಮುದ್ದೇಬಿಹಾಳದಲ್ಲಿ ಪತ್ರಿಕಾ ದಿನಾಚರಣೆ : ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರದ ಮೀನಮೇಷ-ಬಂಗ್ಲೆ ಮಲ್ಲಿಕಾರ್ಜುನ.
ಹಿಂದುತ್ವದ ಮಹತ್ವ ತಿಳಿಸುವ ಕಾರ್ಯ ಸ್ಲಾಗನಿಯ ;ಶ್ರೀಧರ ಮುರಡಿ ಹಿರೇಮಠದ ಶ್ರೀಗಳು
ವಿದ್ಯಾರ್ಥಿಗಳು ಕಾನೂನು ಜ್ಞಾನ ಹೊಂದುವುದು ಅಗತ್ಯ: ಟಿ. ಗುರುರಾಜ